ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು “ಶಕ್ತಿ ಸ್ಮಾರ್ಟ್​​ಕಾರ್ಡ್”

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು “ಶಕ್ತಿ ಸ್ಮಾರ್ಟ್​​ಕಾರ್ಡ್”

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.
ಮಹಿಳೆಯರು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ
ಇನ್ನು ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ

ರಾಜ್ಯ