
ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರರ ಕಚೇರಿಯನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು , ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಅನುದಾನವೂ ಅನುಮೋದನೆಯಾಗಿರುತ್ತದೆ . ಸರ್ಕಾರ ಈ ವಿಚಾರವನ್ನು ಪರಿಗಣಿಸಿ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೃಹ ಸಚಿವ. ಪರಮೇಶ್ವರ್ ರಿಗೆ ಮನವಿ ಮಾಡಿದ್ದಾರೆ.ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೇರಿದಂತೆ ಪ್ರಮುಖರು ಜೊತೆಗಿದ್ದರು.



