
ದುಬಾರಿ ಬೆಲೆಯ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಮೂರ್ನಾಡಿನ ಎಂ.ಬಾಡಗ ಗ್ರಾಮದ ಕಿಗ್ಗಾಲು ರಸ್ತೆಯ ಜಂಕ್ಷನ್ ಬಳಿ ನಡೆದಿದೆ. ಮೂರ್ನಾಡು ನಿವಾಸಿ ಅಲ್ತಾಫ್ ಹುಸೇನ್ (34) ಬಂಧಿತ ಆರೋಪಿ.
ಈತನಿಂದ 12 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಉದ್ದೇಶದಿಂದ ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಎಂ.ಜಗದೀಶ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಯ. ಉಮೇಶ್ ಸಬ್ ಇನ್‌ಸ್ಪೆಕ್ಟರ್ ಶ್ರೀನಿವಾಸಲು ಹಾಗೂ ಸಿಬ್ಬಂದಿಯ ತಂಡವನ್ನು ರಚಿಸಿ, ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

