ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಬೆಳ್ಳಂಬೆಳಗ್ಗೆ ಕಾರೊಂದು ರಸ್ತೆ ಬದಿಯ ಹೊಳೆಗೆ ಬಿದ್ದು ಓರ್ವ ಸಾವನ್ನಪ್ಪಿದ ಘಟನೆ ಅಡ್ಡಹೊಳೆಯಿಂದ ವರದಿಯಾಗಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ಈ ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡು ಮೂಲದ ಹೊಸೂರು ನಿವಾಸಿ ಹರಿಪ್ರಸಾದ್ (50) ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗೋಪಿ(48) ಎಂಬ ವ್ಯಕ್ತಿ ಗಂಭೀರ ಗಾಯಗೊಂಡಿರುವುದಾಗಿ ಮಾಹಿತಿ ಲಭಿಸಿದೆ.
ಗಾಯಾಳುವನ್ನು ಆಂಬ್ಯುಲನ್ಸ್ ಮೂಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ