
ಮಂಗಳೂರಿನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ , ಕಡಬದ ಇಚ್ಲಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಪಂಪ್ ವೆಲ್ ನಲ್ಲಿ ಜೂ. 14ರಂದು ಬೆಳ್ಳಂಬೆಳಿಗ್ಗೆ ನಡೆದಿದೆ.
ಕಡಬ ತಾಲೂಕಿನ ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25ವ.) ಮೃತಪಟ್ಟ ಯುವಕ.
ಬೆಂದೂರ್ ವೆಲ್ ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಇಬ್ಬರು ಸಹೋದರರನ್ನು ಅಗಲಿದ್ದಾರೆ
