
ಬಂಟ್ವಾಳ: ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ಪುಂಚಮೆ ಎಂಬಲ್ಲಿ ನಡೆದಿದೆ.
ಕಳಸಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಕೊಡಿಬೆಟ್ಟು ಗಾಯಗೊಂಡವರು.
ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ ಡಿಕ್ಕಿಹೊಡೆದಿದೆ .ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆ ಮಧ್ಯೆ ಪಲ್ಡಿಯಾಗಿದೆ. ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು,ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .