ಉಬರಡ್ಕದಲ್ಲಿ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಅರಂತೋಡಿನ ಯುವಕ.

ಉಬರಡ್ಕದಲ್ಲಿ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಅರಂತೋಡಿನ ಯುವಕ.

ಯುವಕನೊಬ್ಬ ತನ್ನ ಕೋವಿಯಿಂದ ತಾನೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಉಬರಡ್ಕಗ್ರಾಮದಲ್ಲಿ ನಡೆದಿದೆ.
ಮೃತ ಯುವಕ ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ.
ಉಬರಡ್ಕ ಗ್ರಾಮದ ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕೆ ಎಂದು ಬಂದಿದ್ದ. ಈತನಿಗೆ ಮದ್ಯಪಾನ ಮಾಡುವ ಹವ್ಯಾಸವೂ ಇತ್ತು ಎನ್ನಲಾಗಿದೆ. ಇದೇ ನಿಶೆಯಲ್ಲಿ ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ‌ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ತಕ್ಷಣ ಆಗಮಿಸಿ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ತಮ್ಮ ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ