ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು.

ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿಯ ಪ್ರಥಮ ಪಿಯುಸಿ ವಿದ್ಯಾರ್ಥಿ ಅಚಲ್ ಬಿಳಿನೆಲೆ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು.

ತನ್ನ ಅನುಭವದೊಂದಿಗೆ ಸಲ್ಲಿಸುವ ಪ್ರಕ್ರಿಯೆ, ಪರೀಕ್ಷೆಗೆ ತಯಾರಿ ಹಾಗೂ ಸಂಸ್ಥೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.