
ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಭಂದಪಟ್ಟವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಅವರಿಂದ ಏನೂ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.




