
ದ.ಕ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದು, ಆದರೆ ಶನಿವಾರದಂದು ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿತ್ತು. ಆದರೆ, ಇದೀಗ ಶುಕ್ರವಾರ ಮಳೆ ಇಳಿಕೆಯಾದ ಹಿನ್ನೆಲೆ ಶನಿವಾರದಂದು ರಜೆ ನೀಡಲಾಗಿಲ್ಲ ಎಂದು ತಿಳಿಸಿದ್ದಾರೆ.
