ವಿಟ್ಲ: ಸುಳ್ಯದಿಂದ ಮುಡಿಪು ಹೋಗುತ್ತಿದ್ದ ಅಲ್ಟೋ ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರರು ಗಂಭೀರ ಗಾಯ.

ವಿಟ್ಲ: ಸುಳ್ಯದಿಂದ ಮುಡಿಪು ಹೋಗುತ್ತಿದ್ದ ಅಲ್ಟೋ ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರರು ಗಂಭೀರ ಗಾಯ.

ವಿಟ್ಲ ಜುಲೈ 13 : ಆಲ್ಟೊ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಂಗಾಯಿ ಮೈತ್ರೇಯಿ ಗುರುಕುಲದ ಬಳಿ ಈ ಅಪಘಾತ ಸಂಭವಿಸಿದೆ. ಕಡಂಬು ನಿವಾಸಿಗಳಾದ ಸಿನಾನ್ ಮತ್ತು ಫೈಜಲ್ ಬೈಕ್ ಸವಾರರು ಎಂದು ತಿಳಿದು ಬಂದಿದೆ. ವಾಹನಗಳ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರೊಬ್ಬನ ತಲೆ ಕಾರಿನ ಗಾಜಿಗೆ ತಾಗಿ ಗಾಜು ಪುಡಿಪುಡಿಯಾಗಿ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರು ಚಾಲಕ ಸುಳ್ಯ ಸಮೀಪದ ಕನಕಮಜಲು ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಪುತ್ರಿಯನ್ನು ಮುಡಿಪು ನವೋದಯ ವಸತಿ ಶಾಲೆಗೆ ದಾಖಲಿಸಿ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ರಾಜ್ಯ