
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 8.7.2023 ರಂದು 2021- 22ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ದೇವಳದ ವತಿಯಿಂದ ತಲಾ ಒಂದು ಸಾವಿರ ದತ್ತಿನಿಧಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು. ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀವತ್ಸ, ದೇವಳದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿಗಳಾದ Dr. ನಿಂಗಯ್ಯ , ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ್ ಪಿ ಟಿ , ದೇವಳದ ಕಚೇರಿ ಸಿಬ್ಬಂದಿ ಶ್ರೀ ಶಿವಸುಬ್ರಹ್ಮಣ್ಯ ವಿದ್ಯಾರ್ಥಿಗಳಿಗೆ ದತ್ತಿನಿಧಿಯನ್ನು ವಿತರಿಸಿ ಶುಭ ಹಾರೈಸಿದರು. ಒಟ್ಟು 90 ವಿದ್ಯಾರ್ಥಿಗಳಿಗೆ ದತ್ತಿನಿಧಿಯನ್ನು ವಿತರಿಸಲಾಯಿತು.
