
ಸುದ್ದಿ ಚುನಾವಣೆ 2023 ರಾಜಕೀಯ ಕರ್ನಾಟಕ ಬೆಂಗಳೂರು ಸಿನಿಮಾ ಆಟ ಅಂಕಣ ಆರೋಗ್ಯ ಟೆಕ್ಜ್ಞಾನ ದೇಶ ವಿದೇಶ ನುಡಿ ಹಲವು ನ್ಯಾಯ ಪ್ರೀತಿ ವಿಶೇಷ ವೈವಿಧ್ಯ ವಿಚಾರ ವಿಡಿಯೋ
ನಂದಿನಿ ಹಾಲಿನ ದರ 3 ರೂ. ಏರಿಕೆ; ರೈತರಿಂದ ಖರೀದಿಸುವ ಹಾಲಿಗೂ ಹೆಚ್ಚಳ.


ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ಗೆ 3 ರೂ. ಹೆಚ್ಚಿಸಲಾಗಿದೆ. ನೂತನ ದರಗಳು ಆಗಸ್ಟ್ 1 ರಿಂದ ಜಾರಿಯಾಗಲಿದೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಹಾಲು ಒಕ್ಕೂಟಗಳ ಮತ್ತು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ ಎನ್ ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಕೆಎಂಎಫ್ ನಿರ್ದೇಶಕ ಹೆಚ್ ಡಿ ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.