
ಮಂಗಳೂರು, ಜುಲೈ 22: ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ಬೀಚ್ ನಲ್ಲಿ ಸಹ ವಿದ್ಯಾರ್ಥಿನಿಯೊಂದಿಗೆ ಸುತ್ತಾಡುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.


ಅಳಪೆ ನಿವಾಸಿ ದೀಕ್ಷಿತ್(32) ಹಾಗೂ ಲಾಯ್ಡ್ ಪಿಂಟೋ (32) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಎ ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್ ನ ವಿದ್ಯಾರ್ಥಿಗಳು ಪಣಂಬೂರು ಬೀಚ್ ಗೆ ವಿಹಾರಕ್ಕೆ ತೆರಳಿದ್ದ 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ತೆರಳಿದ್ದರು. ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದ ತಂಡ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಹಲ್ಲೆ ನಡೆಸಿದೆ.
ಮಹಮ್ಮದ್ ಹಫೀಸ್ (20) ಮೇಲೆ ಹಲ್ಲೆಗೊಳಗಾದ ವಿದ್ಯಾರ್ಥಿ ,ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು