
ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್ ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ.
ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ರುಕ್ಮಾ ನಾಯ್ಕ ರವರ ಅಕಾಲಿಕ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಈ ಬಾರಿ ಮಾತ್ರ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಮೂಲಕ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ.
ಕ್ಷೇತ್ರದ ಮತಗಳ ವಿವರ :
ಸುಬ್ರಹ್ಮಣ್ಯ ಬಲ್ಯಾಯ-499
ಪುರುಷೋತ್ತಮ ಪ್ರಭು-353
ಜಗದೀಶ ಭಂಡಾರಿ-140
ತಿರಸ್ಕೃತ-7

