ಕಾರ್ಕಳ: ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು.

ಕಾರ್ಕಳ: ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು.

ಕಾರ್ಕಳ: ಮೂರು ವರ್ಷದ ಮಗುವೊಂದು ನಡೆದುಕೊಂಡು ಹೋಗುತ್ತಿದ್ದ ವೇಳೆ ಹೊಂಡದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ರಮನೆ ಜೆಡ್ಡು ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ಕೃತಿಕಾ (3ವರ್ಷ) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಕೃತಿಕಾ ತನ್ನ ಅಜ್ಜಿಯೊಂದಿಗೆ ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮದ ಕಜ್ಕೆ ದೊಡ್ಡಮನೆ ಹೊಂಡದ ಕಂಠದಲ್ಲಿ ಮೊಮ್ಮಕ್ಕಳೊಂದಿಗೆ ನಡೆದುಕೊಂದು ಹೋಗುತ್ತಿರುವಾಗ ಮೊಮ್ಮಗಳು ಕೃತಿಕಾ (3 ವರ್ಷ) ರವರು ಆಕಸ್ಮಿಕವಾಗಿ ಕಾಲು ಜಾರಿ ಹೊಂಡದ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ರಾಜ್ಯ