ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.

ಇತ್ತೀಚೆಗೆ ಸುಳ್ಯ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ,ಇದೀಗ ಸುಳ್ಯ ತಾಲೂಕಿನ ಗಡಿ ಗ್ರಾಮ ಸಂಪಾಜೆಯಲ್ಲೂ ತಡರಾತ್ರಿ ಹೊಟೇಲ್‌ವೊಂದಕ್ಕೆನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ.

ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು ನುಗ್ಗಿ ಕೈಚಳಕ ತೋರಲು ಪ್ರಯತ್ನ ಪಟ್ಟಿದ್ದಾರೆ. ಹೊಟೇಲ್ ಮಾಲೀಕ ಚೆನ್ನಪ್ಪ ಅನಾರೋಗ್ಯದಿಂದ ಒಂದು ವಾರಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಯಾರು ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲಿನಿಂದ ಬೀಗ ಒಡೆದು ಕಳ್ಳರು ನುಗ್ಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ವೇಳೆ ಶಬ್ದ ಕೇಳಿದ ಪಕ್ಕದ ಮನೆಯವರು ತಕ್ಷಣ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಕೂಡಲೇ ಕೊಡಗು-ಸಂಪಾಜೆ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದರು. ಆದರೆ ಅವರು ಬರುವುದರೊಳಗೆ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯ