
ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಭವ್ಯ ಸಿ ಟಿ ಇವರು ಕುರುಂಜಿ ವೆಂಕಟ್ರಮಣ ಗೌಡರ ಜೀವನ ಹಾಗೂ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ,ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕುರುಂಜಿ ವೆಂಕಟ್ರಮಣ ಗೌಡರ ಆತ್ಮಕ್ಕೆ ಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯೊಂದಿಗೆ ಸಂಪನ್ನಗೊಂಡಿತು.

