
ಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತ ಬಾಲಕ ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬುವರ ಪುತ್ರ ಶ್ರೀಜಿತ್. ಈತನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆಗಸ್ಟ್ 13ರಂದು ನೋವು ಉಲ್ಬಣಗೊಂಡು ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ತಂದಿದ್ದರು. ಬಳಿಕ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದು ಬಾಲಕನಿಗೆ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದಾಗ ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಮನೆಯವರು ಕೊಂಡೊಯ್ದರು.ಅಲ್ಲಿ ನಿನ್ನೆ ಸಂಜೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಬಳಿಕ ಬಾಲಕನ ಸ್ಥಿತಿ ಗಂಭೀರವಾದಾಗ ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ಕೊಂಡಯ್ಯುವಂತೆ ಅಲ್ಲಿಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.ಇಂದು ಬೆಳಿಗ್ಗೆ ಆತನನ್ನು ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಮೃತ ಬಾಲಕ ತಾಯಿ ಪ್ರೇಮ, ಸಹೋದರ ಶ್ರೀನಿತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಇದೀಗ ಬಾಲಕನ ಮೃತದೇಹವನ್ನು ಮಂಗಳೂರಿಂದ ಪುತ್ತೂರಿಗೆ ತರಲಾಗುತ್ತಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ಆಸ್ಪತ್ರೆಯಲ್ಲಿ ಕಾರಣ ಹೇಳದೆ ಆಪರೇಷನ್ ಮಾಡಿದ್ದಾರೆ, ಎಂದು ಮನೆಯವರು ಆರೋಪಿಸಿದ್ದು ಸಂಘಟನೆಗಳ ನೇತ್ರತ್ವದಲ್ಲಿ ಆಸ್ಪತ್ರೆ ಮುಂದೆ ಶವ ವಿಟ್ಟು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ

