
ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ (ರಿ.) ಸುಳ್ಯ ಘಟಕ ಸುಳ್ಯ ತಾಲೂಕು ಸಮಿತಿ ವತಿಯಿಂದ ಕೆ.ವಿ.ಜಿ ಪುರಭವನ ಸುಳ್ಯ ದಲ್ಲಿ ಜರುಗಿದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರವರು ಭಾಗವಹಿಸಿದರು.



ಕಾರ್ಯಕ್ರಮದಲ್ಲಿ ಶಾಸಕರನ್ನು ಸಮಿತಿಯ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ನಂತರ ವಿವಿಧ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.
ನಂತರ ಮಾತನಾಡಿದ ಶಾಸಕರು ಆಟಿ ತಿಂಗಳಿನ ಮಹತ್ವ ಹಾಗೂ ಹಿಂದಿನ ಕಾಲದಲ್ಲಿ ಹಿರಿಯರು ತುಂಬಾ ಕಷ್ಟದಲ್ಲಿ ಜೀವನವನ್ನು ನಡೆಸುತ್ತಿದ್ದರು. ನಮ್ಮ ತುಳುನಾಡಿನ ಆಚರಣೆಯನ್ನು ಯುವ ಸಮೂಹ ಬೆಳೆಸಬೇಕು ಎಂದು ಹೇಳಿದರು. ನಂತರ ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲು ಕಾರಣಿಕರ್ತರದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ವೇದಿಕೆಯಲ್ಲಿ ಮೋನಪ್ಪ ರಾಜರಾಂಪುರ, ಬಾಬು ಜಾಲ್ಸೂರು, ಜಾನಕಿ ಮುರುಳ್ಯ, ಮಹೇಶ್ ಕುಮಾರ್ ಮೇನಲಾ, ಚನಿಯ ಕಲ್ತಡ್ಕ, ವಿಜಯ ಅಲಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
