ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ೭೭ನೇ ಸ್ವಾತಂತ್ರ್ಯೋತ್ಸವದ ಆಚರಣೆ

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ೭೭ನೇ ಸ್ವಾತಂತ್ರ್ಯೋತ್ಸವದ ಆಚರಣೆ

  ಕೆವಿಜಿ : ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ೭೭ನೇ ವರ್ಷದ ಸ್ವಾತಂತ್ರ್ಯ  ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ  ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್  ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ. ಅಕ್ಷಯ್ ಕೆ. ಸಿ., ಕಾರ್ಯದರ್ಶಿಗಳಾದ ಡಾ. ಐಶ್ವರ್ಯ ಕೆ. ಸಿ.,  ಕೌನ್ಸಿಲ್ ಮೆಂಬರ್ ಶ್ರೀ. ಜಗದೀಶ್ ಅಡ್ತಲೆ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ಎನ್.ಎಸ್.ಎಸ್   ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ. ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.
ರಾಜ್ಯ