ಅಂಬ್ಯುಲೆನ್ಸ್ ವಾಹನ ಪಲ್ಟಿ: ಚಾಲಕ ಸಾವು.

ಅಂಬ್ಯುಲೆನ್ಸ್ ವಾಹನ ಪಲ್ಟಿ: ಚಾಲಕ ಸಾವು.

ಬಂಟ್ವಾಳ: ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು‌ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿಲಾಗಿತ್ತು,ಆದರೆ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟ ಚಾಲಕ

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ಅಂಬ್ಯುಲೆನ್ಸ್ ವಾಹನ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದ, ಈತನ ಸಹಿತ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ. ಆದರೆ ಚಾಲಕ ಚಿಕಿತ್ಸೆ ಗೆ ಸ್ಪಂದಿಸಿದೆ ಮೃತ ಪಟ್ಟ ಬಗ್ಗೆ ಆಸ್ಪತ್ರೆಯ ಮೂಲಗಳು ಪೋಲೀಸರಿಗೆ ಮಾಹಿತಿ ನೀಡಿದೆ.

ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ತುರ್ತುನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ .ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಲಾಗಿದೆ.

ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯ ಮಾಹಿತಿ ಲಭ್ಯವಾಗಿಲ್ಲ.

ರಾಜ್ಯ