
ಮಡಿಕೇರಿ ಸೆ.4 : ಕಾಡಾನೆ ದಾಳಿಗೆ ಸಿಲುಕಿ ಅರಣ್ಯ ಇಲಾಖೆಯ ಸಿಬ್ಬಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್ನಲ್ಲಿ ನಡೆದಿದೆ.


ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ. ಸುಂಟಿಕೊಪ್ಪ ಕೆದಕಲ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಮೀನುಕೊಲ್ಲಿ ಮೀಸಲು ಅರಣ್ಯಕ್ಕೆ ಓಡಿಸಲು 20 ಮಂದಿಯ ಆರ್.ಆರ್.ಟಿ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಈ ಸಂದರ್ಭ ಸಿಬ್ಬಂದಿಗಳನ್ನೇ ಅಟ್ಟಾಡಿಸಿಕೊಂಡು ಬಂದ ಕಾಡಾನೆ ಏಕಾಏಕಿ ದಾಳಿ ಮಾಡಿ ಗಿರೀಶ್ ಅವರನ್ನು ತುಳಿದು ಹಾಕಿದೆ.
ಘಟನೆಯಿಂದ ತೀವ್ರವಾಗಿ ಗಾಯಗೊಂಡ ಗಿರೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಸಂತಾಪ: ಮಾಹಿತಿ ತಿಳಿದು ಜಿಲ್ಲಾಸ್ಪತ್ರೆಗೆ ಆಗಮಿಸಿದ ಡಿಎಫ್ಓ ಎ.ಟಿ.ಪೂವಯ್ಯ , ಎಸಿಎಫ್ ನೆಹರು ಮತ್ತು ಇತರ ಅಧಿಕಾರಿ ವೃಂದ ಮತ್ತು ಸಿಬ್ಬಂದಿಗಳು ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಮೃತ ಗಿರೀಶ್ ಹಲವು ವರ್ಷಗಳಿಂದ ಕುಶಾಲನಗರ ಆರ್.ಆರ್.ಟಿ ತಂಡದ ಸದಸ್ಯನಾಗಿದ್ದು, ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಗಿರೀಶ್ಗೆ ಸಂತಾಪ ಸೂಚಿಸಿದರು