
ಮಡಿಕೇರಿ ಸೆ.15 : ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಯಾಮುಡಿ ಗ್ರಾಮದ ಮನೆಯೊಂದರಲ್ಲಿ ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.ಚಾಮರಾಜನಗರದ ಹನೂರು ತಾಲ್ಲೂಕಿನ ಸಾಗ್ಯ ಗ್ರಾಮ ನಿವಾಸಿ ಎಂ. ಮಲ್ಲೇಶ (24) ಬಂಧಿತ ಆರೋಪಿಯಾಗಿದ್ದಾನೆ. ಜೂ.17 ರಂದು ಮಯಾಮುಡಿ ಗ್ರಾಮದ ರಾಜ ಕಾಲೋನಿ ನಿವಾಸಿ ಎನ್.ಮಂಜುನಾಥ ಎಂಬುವವರ ಮನೆಯಲ್ಲಿ ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ.ಪ್ರಕರಣ ಪತ್ತೆ ಮಾಡಿದ ವಿರಾಜಪೇಟೆ ಉಪವಿಭಾಗದ ಡಿಎಸ್‌ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಎಂ.ಎ.ಗೋವಿಂದರಾಜು, ಗೋಣಿಕೊಪ್ಪ ಪೊಲೀಸ್ ಠಾಣೆ ಪಿಎಸ್‌ಐ ರೂಪಾದೇವಿ ಬಿರಾದಾರ್ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಶಂಸಿಸಿದ್ದಾರೆ.

