
ಸುಳ್ಯ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನ ಕಟ್ಟಡ ಸಮಿತಿ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನ ಸೆಬೆಸ್ಟಿನ್ ಹಾಲ್‌ನಲ್ಲಿ ನಡೆದ ಅಸೋಸಿಯೇಷನ್‌ನ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿತ್ತು