
ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ ,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಇದರ ವತಿಯಿಂದ ಗಾಂಧಿಸ್ಮೃತಿ,ಜನ ಜಾಗೃತಿ ಜಾಥಾ ಮತ್ತು ಸಮಾವೇಶ ಸುಳ್ಯದ ಅಮರಶ್ರೀಭಾಗ್ ನ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.ಎಂದುಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಯವರು ವಿವರ ನೀಡಿದ್ದಾರೆ ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಇಂದು ಸುದ್ದಿಗೋಸ್ಟಿ ನಡೆದಿ ಈ ಬಗ್ಗೆ ವಿವರವನ್ನು ತಿಳಿಸಿದರು.ಧರ್ಮಾಧಿಕಾರಿಯವರ ಕಲ್ಪನೆಯಲ್ಲಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕೆ ಪಣತೊಟ್ಟು ಗಾಂಧೀಜಿಯವರ ಕನಸ್ಸಿಗೆ ಪೂರಕವಾಗಿ ವ್ಯಸನ ಮುಕ್ತ ಸಮಾಜದ ಜಾಗೃತಿ ಗಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ .ವೀರೇಂದ್ರ ಹೆಗ್ಗಡೆಯವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿರುವರು. ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚಿನ ಧರ್ಮಗುರು ರೆ. ಫಾ. ವಿಕ್ಟರ್ ಡಿಸೋಜ ಶುಭ ಸಂದೇಶ ನೀಡಲಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾಎಲ್.ಹೆಚ್.ಮಂಜುನಾಥ್ ಆಶಯ ಭಾಷಣ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಹಲವು ಗಣ್ಯರು ಭಾಗವಹಿಸಲಿದ್ದಾರೆ, ಸುಮಾರು 5 ರಿಂದ 7 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ
ವ್ಯಸನ ಮುಕ್ತ ರನ್ನು ಗುರುತಿಸಿ” ಜಾಗೃತಿ ಅಣ್ಣ”, ಜಾಗೃತಿ “ಮಿತ್ರ “ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕ ಆಪದ್ಭಾಂದವರಿಗೆ ಶೌರ್ಯ ಶ್ರೇಷ್ಠ ಸಾಧಕ ಪ್ರಶಸ್ತಿ ನೀಡಲಾಗುವುದು. ನವಜೀವನ ಸಾಧಕ ಪ್ರಶಸ್ತಿಯನ್ನು ವಿತರಣೆಯನ್ನು ಧರ್ಮಾಧಿಕಾರಿಯವರು ನೆರವೇರಿಸಲಿದ್ದಾರೆ ಎಂದು ವಿವರ ತಿಳಿಸಿದರು ಸುದ್ದಿಗೋಸ್ಟಿಯಲ್ಲಿ ನಿರ್ದೇಶಕ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ,ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ್ ಅಮೆಚೂರು,ಯೋಜನಾಧಿಕಾರಿ ನಾಗೇಶ್ ಪಿ
ತಾಲೂಕು ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜನಜಾಗೃತಿ ವೇದಿಕೆಯ ಸದಸ್ಯ ಪದ್ಮನಾಭ ಜೈನ್ , ಬೂಡು ರಾಧಾಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.



