ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ .

ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ .

ಒಡಿಶಾ ರೈಲು ದುರಂತದ ಕರಾಳ ನೆನಪು ಮಾಸುವ ಮುನ್ನವೇ ಮೊತ್ತೊಂದು ರೈಲು ಹಳಿತಪ್ಪಿಸುವ ವಿದ್ವಂಸಿಕ ಕೃತ್ಯಕ್ಕೆ ಕೈ ಹಾಕಿರುವ ಬಗ್ಗೆ ವರದಿಯಾಗಿದೆ. ರೈಲ್ವೆ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲು ಹಾಗೂ ರಾಡ್‌ಗಳನ್ನಿಟ್ಟು ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ ಪೈಲಟ್‌ಗಳು ರೈಲನ್ನು ತುರ್ತಾಗಿ ನಿಲ್ಲಿಸಿ ಭಾರೀ ಅನಾಹುತವನ್ನು ತಪ್ಪಿಸಿದ ಘಟನೆ ಜೈಪುರದಲ್ಲಿ ನಡೆದಿದೆ.

ಉದಯಪುರದಿಂದ ಜೈಪುರಕ್ಕೆ ವಂದೇ ಭಾರತ್ ರೈಲು ಚಲಿಸುತ್ತಿದ್ದು, ಈ ವೇಳೆ ಹಳಿಯ ಮೇಲೆ ಕೆಲವು ಕಲ್ಲುಗಳನ್ನಿಟ್ಟಿರುವುದನ್ನು ಪೈಲಟ್‌ಗಳು ಗಮನಿಸಿದ್ದಾರೆ. ದೊಡ್ಡ ಅಪಘಾತವನ್ನು ತಡೆಯಲು ಪೈಲಟ್‌ಗಳು ತಕ್ಷಣವೇ ರೈಲನ್ನು ನಿಲ್ಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡುತ್ತಿದೆ. ಹಳಿಯ ಮೇಲೆ ಹಲವಾರು ಕಲ್ಲುಗಳು, ಕಬ್ಬಿಣದ ರಾಡ್‌ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಹಾಗೂ ಜಿಲ್ಲಾ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ

ರಾಜ್ಯ