ಬಿಜೆಪಿ ಟಿಕೆಟ್‌ ಡೀಲ್ ಪ್ರಕರಣ – ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ನೋಟಿಸ್‌ ಜಾರಿ..

ಬಿಜೆಪಿ ಟಿಕೆಟ್‌ ಡೀಲ್ ಪ್ರಕರಣ – ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ನೋಟಿಸ್‌ ಜಾರಿ..

ಸುಳ್ಯ : ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರಿನ ಬಿಜೆಪಿ ಟಿಕೆಟ್‌ ನೀಡುವ ವಿಚಾರವಾಗಿ ನಡೆದ ಡೀಲ್‌ ಗೆ ಸಂಬಂಧಪಟ್ಟಂತೆ ಚೈತ್ರಾ ಮತ್ತು ಹಾಲಶ್ರೀ ಸ್ವಾಮೀಜಿ ಬಂಧನದ ಬಳಿಕ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು ಮಂಗಳೂರಿನ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದು ಬೆಂಗಳೂರು ನಗರ ಸಿಸಿಬಿ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್‌ ಕಮೀಷನರ್‌ ರೀನಾ ಸುವರ್ಣ ನೋಟಿಸ್‌ ಜಾರಿ ಮಾಡಿದ್ದಾರೆ. ಚೈತ್ರಾ ಈಡಿಗೆ ಬರೆದ ಪತ್ರದಲ್ಲಿ ವಜ್ರದೇಹಿ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ, ಸಿಟಿ ರವಿ ಹೆಸರನ್ನು ಉಲ್ಲೇಖಿಸಿದ್ದರು.

ರಾಜ್ಯ