ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!

ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು
ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಕಡಬದ ನಿವಾಸಿ ಯಜ್ಞೇಶ್‌ ಪೋಕ್ಸೊ ಕಾಯ್ದೆಯಡಿ ಬಂಧಿತನಾದ ಆರೋಪಿಯಾಗಿದ್ದಾನೆ.
ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೋಗಿ ಈ ಹೀನಾ ಕೃತ್ಯ ಎಸಗಿದ್ದ ಎನ್ನಲಾಗಿದೆ.
ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿದ ಹಿನ್ನಲೆಯಲ್ಲಿ ಆಕೆ ಕಲಿಯುತ್ತಿದ್ದ ಶಾಲೆಯ ಶಿಕ್ಷಕಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಯು ಬೆಂಗಳೂರಿನಲ್ಲಿ ಇರುವುದನ್ನು ಖಚಿತಪಡಿಸಿದ ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.
ಬಳಿಕ ಮಡಿಕೇರಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ ಲಾಡ್ಜ್‌ ನಲ್ಲಿ ಸ್ಥಳ ಮಹಜರು ನಡೆಸಿ ಕೋರ್ಟಿಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ರಾಜ್ಯ