
ಕರ್ನಾಟಕದ ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಒಟ್ಟು 17 ಮಂದಿ ಶಬರಿಮಲೆ ಯಾತ್ರಿಕರು ಗಾಯಗೊಂಡಿರುವ ಘಟನೆ ಕೇರಳದ ಅತ್ತಿವಲವುನ ಎರುಮೆಲಿನಲ್ಲಿ ನಡೆದಿದೆ.

ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಟ್ಟು 17 ಮಂದಿ ಗಾಯಗೊಂಡಿದ್ದಾರೆ. ಶಬರಿಮಲೆ ಯಾತ್ರಿಕರನ್ನು ಹೊತ್ತ ಬಸ್ ಪತ್ತನಂತಿಟ್ಟ ಜಿಲ್ಲೆಯಲ್ಲಿರುವ ಬೆಟ್ಟದ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಪಲ್ಟಿಯಾಗಿದೆ.
ಬಸ್ಸಿನಲ್ಲಿ ಒಟ್ಟು 43 ಮಂದಿ ಯಾತ್ರಿಕರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದೆ. ಯಾತ್ರಾರ್ಥಿಗಳು ಮುಳಬಾಗಿಲಿನಿಂದ ವಿನಾಯಕ ಖಾಸಗಿ ಬಸ್‌ನಲ್ಲಿ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಗಾಯಗೊಂಡ 17 ಮಂದಿಯಲ್ಲಿ 15 ಮಂದಿಯನ್ನು ಕಂಜಿರಪ್ಪಲಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಳಿದ ಇಬ್ಬರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸಲಾಗಿದೆ.