
ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಈತನ ತಂದೆ ಕೃಷ್ಣಯ್ಯ ಆಚಾರ್ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ.



ರಾತ್ರಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಹೆಚ್ಚಾದಾಗ ಕೃಷ್ಣಯ್ಯ ಆಚಾರಿ ತನ್ನ ಕಪಾಟಿನಲ್ಲಿ ಇರಿಸಿದ್ದ ಚೂರಿಯಿಂದ ಮಗನ ಕುತ್ತಿಗೆಗೆ ಇರಿದಿದ್ದಾನೆ.
ಇನ್ನು ಘಟನೆ ಬಳಿಕ ಮನೆಯವರು ಸೇರಿ ಜಗದೀಶ್ ನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸಾವನ್ನಪ್ಪಿದ್ದಾನೆ.
ಆರೋಪಿ ಕೃಷ್ಣಯ್ಯ ಅಚಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
