
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ಯವಕ ವಂಚಿಸಿದನೆಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಯುವಕನ ವಿರುದ್ದ ಇದೀಗ ಪ್ರಕರಣ ದಾಖಲಾಗಿದೆ.ಬೆಳ್ಳಾರೆಯ ಅಟೋ ಚಾಲಕನೋರ್ವ ಪಂಜದ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದನೆಂಬ ಆರೋಪದಡಿಯಲ್ಲಿ ಆ ಯುವಕನ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಪಂಜದ ಅಪ್ರಾಪ್ತ ಬಾಲಕಿಯನ್ನು ಆಟೋ ಚಾಲಕನೊಬ್ಬ ಪ್ರೀತಿಸುವುದಾಗಿ ಹೇಳಿ, ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆಕೆಯನ್ನು ನಿರಾಕರಿಸುತ್ತಿರುವುದಾಗಿ ವರದಿಯಾಗಿದೆ.
ಇದರಿಂದ ಮನನೊಂದ ಆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ ಇದೀಗ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

