
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(35)ಈತ ಸಿಆರ್‌ಪಿಎಫ್ ಸಿಬ್ಬಂದಿಯಾಗಿದ್ದ ಎಂದು ವರದಿಯಾಗಿದೆ. ಮಂಗಳೂರು ಏರ್‌ಪೋರ್ಟಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪ್ರಾಥಮಿಕ ಮಾಹಿತಿ ದೊರಕಿದೆ. ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಪೊಲೀಸರು ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.
ಕಳೆದ ಭಾನುವಾರ(ನ.12) ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಯೋರ್ವ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಇರಿದು ಹತ್ಯೆ ಮಾಡಿ, ಪರಾರಿಯಾಗಿದ್ದ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

