ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ

ಮಂಗಳೂರು: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆ ಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

ಪ್ರಕರಣ ಕ್ಕೆ ಸಂಬಂಧ ಪಟ್ಟಂತೆ ಉಡುಪಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆಯನ್ನು ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಿದ ಬಳಿಕ ಬಿಗಿ ಪೊಲೀಸ್‌ ಬಂದೋಬಸ್ತ್‌ ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.ಪೊಲೀಸರ ಪರವಾಗಿ ಹಿರಿಯ ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಎಚ್‌ ಎಂ ನದಾಫ್‌ ಅವರು ಮಂಡಿಸಿದ ವಾದವನ್ನು ಆಲಿಸಿದ ಉಡುಪಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಶಾಮ್‌ ಪ್ರಸಾದ್‌ ಅವರು ಆರೋಪಿಯನ್ನು ನ.28ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದರು.

ರಾಜ್ಯ