
ಅರಂಬೂರಿನಲ್ಲಿ ಮೊಣ್ಣಂಗೇರಿಯ ವ್ಯಕ್ತಿಯೊಬ್ಬರು ಪಯಸ್ವಿನಿ ಹೊಳೆಯಲ್ಲಿ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.


ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸುಳ್ಯ ಪೊಲೀಸರು ಹಾಗೂ ಅಗ್ನಿಶಾಮಕದಳದ ಮುಳುಗುತಜ್ಞರು ಸ್ಥಳಕ್ಕೆ ತೆರಳಿ ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ, ಪೈಚಾರಿನ ಅಸ್ತ್ರ ಮುಳುಗು ತಂಡ ಮೃತದೇಹವನ್ನು ಮೇಲಕ್ಕೆತ್ತಿದ್ದು,ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ.


