
ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ನಡೆದಿದೆ.ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ (ಡಿ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಡಿ. 6ರಂದು ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ ಬಗ್ಗೆಯೂ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
