
ಮಂಗಳೂರಿನ ಕೊಡಿಯಾಲ್ ಗುತ್ತಿನ ಫ್ಲ್ಯಾಟ್ ವೊಂದರಲ್ಲಿ ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಸುಮಾರು 3 ವರ್ಷದ ಮಗು ಆಟವಾಡುತ್ತಾ ನಾಲ್ಕನೇ ಮಹಡಿಯ ಫ್ಲ್ಯಾಟ್ ನ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿಕೊಂಡಿದೆ. ಗಾಬರಿಗೊಂಡ ಪೋಷಕರು ಎಷ್ಟೇ ಪ್ರಯತ್ನಿಸಿದರು ಬಾಗಿಲು ತೆಗೆಯಲು ಸಾಧ್ಯವಾಗಿರಲಿಲ್ಲ. ಬಳಿಕ ಪಾಂಡೇಶ್ವರ ಠಾಣೆಯ ಅಗ್ನಿಶಾಮಕ ಅಧಿಕಾರಿ ರಾಜಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಅವರು ಹಗ್ಗದ ಮೂಲಕ 4ನೇ ಮಹಡಿಯ ಮೇಲಿನಿಂದ ಮಗುವಿದ್ದ ಕೋಣೆಯ ಒಳಗೆ ತೆರಳಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
