ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಇರುವ ಅವಕಾಶಗಳು,ಎದುರಿಸುವ ಸವಾಲುಗಳು” -ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಇರುವ ಅವಕಾಶಗಳು,ಎದುರಿಸುವ ಸವಾಲುಗಳು” -ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ

ಪೆರುವಾಜೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ”ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಇರುವ ಅವಕಾಶಗಳು,ಎದುರಿಸುವ ಸವಾಲುಗಳು” ಎಂಬ ವಿಷಯದ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಬೆಳ್ಳಾರೆ ವಲಯ ಇದರ ಸಹಕಾರದೊಂದಿಗೆ ಪೂಜ್ಯ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಡಾ.ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ ಡಿ.27 ರಂದು ಪೆರುವಾಜೆ ಜೆ.ಡಿ.ಅಡಿಟೋರಿಯಂನಲ್ಲಿ ನಡೆಯಿತು.

ಸುಳ್ಯ ವಿಧಾನಸಭಾ ಶಾಸಕರಾದ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.ಬೆಳ್ಳಾರೆ ವಲಯ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಎಚ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.ಅನುರಾಧ ಕುರುಂಜಿಯವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.ವೇದಿಕೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ನಿರ್ದೇಶಕರಾದ ಪ್ರವೀಣ ಕುಮಾರ್,ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನಾಗೇಶ್, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕು ಪ್ರಗತಿ ಬಂಧು ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,ಬೆಳ್ಳಾರೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಆನಂದ ಗೌಡ ಪೆರಿಯಾಣ, ಪೆರುವಾಜೆ ಪ್ರಗತಿ ಬಂದು ಸ್ವ.ಸ್ವಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಂದರ ನಾಯ್ಕ ಉಪಸ್ಥಿತರಿದ್ದರು.

ಬಾಳುಗೋಡು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಪ್ರಾರ್ಥಿಸಿ, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನಾಗೇಶ್ ರವರು ಸ್ವಾಗತಿಸಿ,ಹರಿಶ್ಚಂದ್ರ ಕುಳ್ಳಂಪಾಡಿ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

ರಾಜ್ಯ