
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ.
ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿದ್ದ ಮದುವೆ, ಇನ್ನಿತರ ಸಭೆ ಸಮಾರಂಭಗಳಿಗೆ ಅಡ್ಡಿಯಾಗಿದೆ. ಬುಧವಾರ ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇತ್ತು. ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಭಾಗದ ಅರಬ್ಬಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಇದರಿಂದಾಗಿ ನಿಮ್ನ ಒತ್ತಡ ನಿರ್ಮಾಣ ಆಗಿದೆ. ಪರಿಣಾಮ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣ ಮಳೆಮುಂದುವರೆಯಲಿದೆ ಎಂದು ಹವಾಮಾ ಇಲಾಖೆ ಮಾಹಿತಿ ನೀಡಿದೆ.ದಕ್ಷಿಣ ಕನ್ನಡ ಅಲ್ಲದೆ , ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕ ರಾಜ್ಯದ ಹಲವೆಡೆ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

