
ಸುಳ್ಯ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೃರಿವಾರಕಾನ ಡಿಪೋ ಬಳಿಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಡೆದಿದೆ, ಬೆಂಗಳೂರು ಕಡೆಯಿಂದ ಬಂದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದು, ತಡೆ ಬೇಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ, ಕಾರು ಸವಾರರು ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಯದಿಂದ ಪಾರಾಗಿದ್ದಾರೆ,


ಘಟನೆಯಲ್ಲಿ ಸ್ಕೂಟರ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ . ಕಾರು ಮತ್ತು ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ.


