ಸರಕಾರಿ ಬಸ್ ಗಳ ಓವರ್ ಟೇಕ್ ಭರದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ.

ಸರಕಾರಿ ಬಸ್ ಗಳ ಓವರ್ ಟೇಕ್ ಭರದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ.

ಬಂಟ್ವಾಳದಲ್ಲಿ ಸರಕಾರಿ ಬಸ್ ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವಗ್ಗ ದಲ್ಲಿ ನಡೆದಿದೆ.

ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಪಲ್ಯ ಎಂಬವರ ಮಗಳು ಪಲ್ಲವಿ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿ.

ಕೆಳಗಿನ ವಗ್ಗ ತಿರುವಿನಲ್ಲಿ ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಎರಡು ಬಸ್ ಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಓವರ್ ಟೇಕ್ ಮಾಡಿದೆ.

ಈ ಸಂದರ್ಭದಲ್ಲಿ ಬಂಟ್ವಾಳ ಕಡೆಯಿಂದ ವಾಮದಪದವು ಕಾಲೇಜಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ.ಬಸ್ ಗಳೆರಡರ ಅಜಾಗರೂಕತೆಯಿಂದ ಸಂಚಾರಕ್ಕೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಗಾಯಗೊಂಡ ವಿದ್ಯಾರ್ಥಿನಿಯ ತಂದೆ ಗೋಪಾಲ ಸಪಲ್ಯ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ