ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ : ಕೊಡಗಿನಿಂದ ರವಿ ಕಾಳಪ್ಪ: ಉಡುಪಿಯಿಂದ ಕಿಶೋರ್ ಕುಂದಾಪುರ .

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ : ಕೊಡಗಿನಿಂದ ರವಿ ಕಾಳಪ್ಪ: ಉಡುಪಿಯಿಂದ ಕಿಶೋರ್ ಕುಂದಾಪುರ .

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ.ಕೊಡಗಿನಿಂದ ರವಿ ಕಾಳಪ್ಪ ಆಯ್ಕೆಯಾಗಿದ್ದಾರೆ, ಉಡುಪಿಯಿಂದ ಕಿಶೋರ್ ಕುಂದಾಪುರ ಆಯ್ಕೆಯಾಗಿದ್ದಾರೆ.
ಬಿಲ್ಲವ ಸಮಾಜಕ್ಕೆ ಸೇರಿದ ಕುಂಪಲ ಅವರು
ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದ ನಾಯಕ ಎಂದೇ ಗುರುತಿಸಿಕೊಂಡಿದ್ದರು.ಕುಂಪಲ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸತೀಶ್ ಕುಂಪಲ ಗುರುತಿಸಿಕೊಂಡಿದ್ದರು.

ಕಿಶೋರ್ ಕುಮಾರ್ ಅವರು 2013 ರಲ್ಲಿ ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪಕ್ಷೇತರರಾಗಿ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕುಂದಾಪುರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಮಕ್ಕಂದೂರಿನ ನಾಪಂಡ ರವಿ ಕಾಳಪ್ಪ ಅವರು ಬಿ.ಎಸ್ಸಿ ಪದವೀಧರರು. ಕಾಲೇಜು ದಿನಗಳಲ್ಲಿಯೇ ಎಬಿವಿಪಿ ಜಿಲ್ಲಾ ಪ್ರಮುಖರಾಗಿ ಕೆಲಸ ಮಾಡಿದ್ದರು. ನಂತರ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ 2 ಬಾರಿ ಹಾಗೂ ಜಿಲ್ಲಾಧ್ಯಕ್ಷರಾಗಿ ಒಂದು ಬಾರಿ ಆಯ್ಕೆಯಾಗಿದ್ದರು.
ಮಡಿಕೇರಿ ತಾಲ್ಲೂಕು ಮಂಡಲದ ಕಾರ್ಯದರ್ಶಿಯಾಗಿ, ಜಿಲ್ಲಾ ಕಾರ್ಯದರ್ಶಿಯಾಗಿ ಮಾತ್ರವಲ್ಲ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಒಟ್ಟು 5 ಬಾರಿ ಇವರು ಕಾರ್ಯನಿರ್ವಹಿಸಿದ್ದಾರೆ.
ಮಕ್ಕಂದೂರು ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ 2 ಬಾರಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಮಡಿಕೇರಿ ತಾಲ್ಲೂಕು ಅಕ್ರಮ, ಸಕ್ರಮ ಸಮಿತಿ ಅಧ್ಯಕ್ಷರಾಗಿ, ಕರ್ನಾಟಕ ಜೀವವೈವಿಧ್ಯ ಮಂಡಳಿಯ ರಾಜ್ಯಾಧ್ಯಕ್ಷರಾಗಿ ಇವರು ಕಾರ್ಯನಿರ್ವಹಿಸಿದ್ದಾರೆ.

ರಾಜ್ಯ