
ಬೆಳ್ತಂಗಡಿಯ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳಿಗೆ ಸಿಲುಕಿದ ಘಟನೆ ನಡೆದಿದೆ.

ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟುವಿನಲ್ಲಿ ಮೇಲ್ಭಾಗದಲ್ಲಿದ್ದ ವಿದ್ಯುತ್ ತಂತಿಗಳನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದವು.

ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. ಇದು ಕಾರ್ಕಳದ ಗುತ್ತಿಗೆ ಕಂಪೆನಿಯೊಂದರ ಲಾರಿಯಾಗಿದ್ದು, ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ.ಚಾಲಕ ಕುಷ್ಟಗಿಯ ಕುಮಾರ್‌ನನ್ನು ವೇಣೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು.
ಸ್ಥಳಕ್ಕೆ ಮೆಸ್ಕಾಂ ಎಂಜಿನಿಯರ್, ವೇಣೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
