
ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಶಾಸಕರಾದ ಟಿ.ಎಸ್ ಶ್ರೀವತ್ಸ, ರಂಗ ಕುಟುಂಬದ ಸದಸ್ಯರಾದ ಆರ್.ಗುರು, ಕಿರಣ್ ರಂಗ, ವಿಷ್ಣು ರಂಗ, ಅನಿರುದ್ದ ರಂಗ ಮತ್ತು ನಿಖಿಲ್ ರಂಗ ಉಪಸ್ಥಿತರಿದ್ದರು.


