ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!

ಬೆಳ್ತಂಗಡಿ: ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ಜೆಜೆಎಂ ಕಾಮಗಾರಿಗಾಗಿ ತೆರಳುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಲ್ಟಿಯಾದ ಘಟನೆ ನಡೆದಿದೆ.

ಮನೆಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ್ ಮೆಷಿನ್ ಮೂಲಕ ಕಾಮಗಾರಿ ನಡೆಯುತಿದ್ದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ಕಾಮಗಾರಿ ಮಾಡಲು ಟ್ಯಾಕ್ಟರ್ ನಲ್ಲಿ ವಿವಿಧ ಸಾಮಾಗ್ರಿಗಳನ್ನು ಹೇರಿಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ರಾಜ್ಯ