
:ಕಂಬಳ ವೀಕ್ಷಣೆಗೆ ಬಂದಿದ್ದ ಬಾಲಕಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಕಡಬ ಮೂಲದ ಯುವಕನನ್ನು ಪೊಲೀಸರು ಪುತ್ತೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಕಿರುಕುಳಕ್ಕೊಳಗಾದ ಬಾಲಕಿ ಬೊಬ್ಬೆ ಹಾಕಿದ ವೇಳೆ ಆರೋಪಿ ಅಲ್ಲಿಂದ ಪರಾರಿಯಾಗಲೆತ್ನಿಸಿದ.ಆದರೆ ಅಲ್ಲಿ ಸೇರಿದ್ದ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜ.27ರಂದು ರಾತ್ರಿ ನಡೆದಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕಡಬದ ಶಾಕೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ನಡೆದ ಬೆಳವಣಿಗೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಬಳಿ ನೂರಾರು ಮಂದಿ ಸೇರಿ ಆಪಾದಿತನ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆರೋಪಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಕುರಿತು ಭರವಸೆ ನೀಡಿದ ಬಳಿಕ ಗುಂಪು ಸೇರಿದ್ದವರು ಅಲ್ಲಿಂದ ತೆರಳಿದರು ಎನ್ನಲಾಗಿದೆ.
ಇದೀಗ ಆರೊಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
