ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಜ.31ರ ಬುಧವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ನೂತನ ಪದಗ್ರಹಣ ಹಿನ್ನೆಲೆ ಮಂಗಳೂರು ಆಗಮಿಸಿ ಅಡ್ಯಾರ್ ಗಾರ್ಡ್ ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ನಿನ್ನೆ ರಾತ್ರೆಯೇ ಧರ್ಮಸ್ಥಳದಲ್ಲಿ ತಂಗಿದ್ದರು.

ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕಾರ್ಯಕರ್ತರು ನಿನ್ನೆ ರಾತ್ರಿ ಪುಂಜಾಲಕಟ್ಟೆಯಲ್ಲಿ ಭವ್ಯ ಸ್ವಾಗತ ಕೋರಿ ಬಳಿಕ ಧರ್ಮಸ್ಥಳದವರೆಗೆ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಸ್ವಾಗತಿಸಿದರು. ಇಂದು 8 ಗಂಟೆಗೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ಈ ವೇಳೆ ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಸೇರಿದಂತೆ ಪ್ರಮುಖರು ರಾಜ್ಯಾಧ್ಯಕ್ಷರ ಜತೆಗಿದ್ದರು.

ರಾಜ್ಯ