
ಇಂದು ಮಂಗಳೂರು ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತು ಎಂಡಿಎಂಎ ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿಗಳು ಮತ್ತು ಕಾವೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 7.28 ಗ್ರಾಂ ಎಂಡಿಎಂಎ ಮತ್ತು ಸುಜುಕಿ ಎಕ್ಸಸ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 15/2024 ಕಲಂ:8(c), 21 (b) NDPS ರಂತೆ ಪ್ರಕರಣ ದಾಖಲಾಗಿಸಿದ್ದರೆ ಎಂದು ತಿಳಿದು ಬಂದಿದೆ. ಇತ್ತೀಚಿಗೆ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.