ಬೆಳ್ಳಾರೆ : ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರ ವಿಶೇಷ ತಂಡ ಬಂಧಿಸಿದೆ.

ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಬಂಧಿತ ಆರೋಪಿಗಳು.

ಬಂಧಿತರಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ಈ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕಕರ ಮಾರ್ಗದರ್ಶನದಂತೆ ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ ಪಿ ರವರು ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿದೆ.

ರಾಜ್ಯ