
ಕೊಡಗು ಚೇಲಾವರ ಫಾಲ್ಸ್ ನಲ್ಲಿ ಯುವಕ ನೀರುಪಾಲು ಚೇಲಾವರ ಫಾಲ್ಸ್ ನಲ್ಲಿ ಕೇರಳದ ಯುವಕ ನೀರುಪಾಲಾದ ಘಟನೆ ಚೆಯ್ಯಂಡಾಣೆ ಬಳಿಯ ಚೇಲಾವರ ಫಾಲ್ಸ್ ನಲ್ಲಿ ನಡೆದಿದೆ.
ಕೇರಳದ ಮಟ್ಟನ್ನೂರು ನಿವಾಸಿ ರಶೀದ್( 25) ಮೃತ ದುರ್ದೈವಿ,ಕೇರಳದ ಮಟ್ಟನ್ನೂರು ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರ ಪುತ್ರ ಎಂದು ಹೇಳಲಾಗಿದೆ, ಮೂವರು ಸ್ನೇಹಿತರೊಂದಿಗೆ ಚೇಲಾವರ ಜಲಪಾತ ವೀಕ್ಷಣೆಗೆಂದು ಬಂದಿದ್ದ ರಶೀದ್ , ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ. ಜಲಪಾತದಿಂದ ಮೃತದೇಹವನ್ನು ಮೇಲೆತ್ತುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ ನಾಪೋಕ್ಲು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ
ಘಟನೆಗೆ ಸಂಬಂಧಿಸಿದಂತೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
